Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು, ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನಗೆ ತಿಳಿದಮಟ್ಟಿಗೆ, ಕೆಟ್ಟದ್ದನ್ನು ನೆಡುವವರು, ದುಷ್ಟತನವನು ಬಿತ್ತುವವರು, ಅದನ್ನೆ ಕೊಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ನೋಡಿರುವಂತೆ, ಅಧರ್ಮವನ್ನು ಮತ್ತು ಕೇಡನ್ನು ಬಿತ್ತುವವರು ಅದನ್ನೇ ಕೊಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಕಂಡ ಹಾಗೆ ಕೆಟ್ಟತನವನ್ನು ಊಳುವವರೂ ದುಷ್ಟತನವನ್ನು ಬಿತ್ತುವವರೂ ಅದನ್ನೇ ಕೊಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:8
11 ತಿಳಿವುಗಳ ಹೋಲಿಕೆ  

ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.


ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.


ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”


ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ, ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,


ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.


ಬೀಜವನ್ನು ನೆಟ್ಟ ದಿನದಲ್ಲಿಯೇ ಬೇಲಿಕಟ್ಟಿ, ಮರುದಿನ ಬೆಳಿಗ್ಗೆ ಮೊಳೆಯುವಂತೆ ಮಾಡಿದ್ದೀ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು