Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತಾವರೆ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು, ನದಿಯ ನೀರವಂಜಿಗಳು ಅದನ್ನು ಸುತ್ತಿಕೊಂಡಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ನೆರಳನ್ನೀಯುತ್ತವೆ ತಾವರೆ ಎಲೆಗಳು ಅದರ ಸುತ್ತಲಿರುತ್ತವೆ ನದಿಯ ನೀರವಂಜಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಎಲಚಿ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು, ನದಿಯ ನೀರವಂಜಿಗಳು ಅದನ್ನು ಸುತ್ತಿಕೊಂಡಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತಾವರೆಗಿಡಗಳು ತಮ್ಮ ನೆರಳಿನಿಂದ ಅದನ್ನು ಮರೆಮಾಡುತ್ತವೆ; ನದಿಯ ಸಮೀಪದಲ್ಲಿ ಬೆಳೆಯುವ ನೀರವಂಜಿ ಮರಗಳ ಕೆಳಗೆ ಅದು ವಾಸಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತಾವರೆ ಎಲೆಗಳು ನೆರಳನ್ನು ಅದಕ್ಕೆ ಹರಡುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:22
6 ತಿಳಿವುಗಳ ಹೋಲಿಕೆ  

“‘ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು, ನೀರವಂಜಿಯ ಮರದ ಹಾಗೆ ಬೆಳೆಯಿಸಿತು.


ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.


ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.


ತಾವರೆಯ ಗಿಡಗಳ ಕೆಳಗೂ, ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ಮಲಗಿಕೊಳ್ಳುವುದು.


ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.


ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು