Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದು ನಿನ್ನ ಬಳಿ ವಿಜ್ಞಾಪಿಸುವುದೋ? ನಿನ್ನ ಸಂಗಡ ಸವಿಮಾತನಾಡೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದು ನಿನ್ನ ಸಂಗಡ ಸವಿಮಾತಾಡೀತೆ? ನಿನಗೆ ವಿನಮ್ರ ವಿಜ್ಞಾಪನೆ ಮಾಡೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದು ನಿನಗೆ ಬಹಳವಾಗಿ ವಿಜ್ಞಾಪಿಸುವದೋ? ನಿನ್ನ ಸಂಗಡ ಸವಿಮಾತಾಡೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತನ್ನನ್ನು ಸ್ವತಂತ್ರವಾಗಿ ಬಿಟ್ಟುಕೊಡಬೇಕೆಂದು ಅದು ನಿನ್ನನ್ನು ಬೇಡಿಕೊಳ್ಳುವುದೇ? ಅದು ನಯವಾದ ಪದಗಳಿಂದ ನಿನ್ನೊಂದಿಗೆ ಮಾತಾಡುತ್ತದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದು ಅನೇಕ ಸಾರಿ ಕರುಣೆಗಾಗಿ ನಿನಗೆ ವಿಜ್ಞಾಪನೆಮಾಡಿತೇ? ನಿನ್ನ ಸಂಗಡ ನಮ್ರತೆಯಿಂದ ಮಾತನಾಡೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:3
10 ತಿಳಿವುಗಳ ಹೋಲಿಕೆ  

ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು, ಮೃದುವಚನವು ಎಲುಬನ್ನು ಮುರಿಯುವುದು.


ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.


ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.


ಅದರ ಮೂಗಿಗೆ ಗಾಳವನ್ನು ಇಡುವೆಯೋ? ಅದರ ದವಡೆಗೆ ಮುಳ್ಳನ್ನು ಚುಚ್ಚುವಿಯೋ?


ಅದನ್ನು ನೀನು ಸದಾ ಆಳಾಗಿ ಸೇರಿಸಿಕೊಳ್ಳುವಂತೆ, ನಿನ್ನೊಂದಿಗೆ ಒಪ್ಪಂದ ಮಾಡಿಕೊಳ್ಳುವುದೋ?


ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.


‘ಬೆಳ್ಳಿಯೆಲ್ಲಾ ನನ್ನದು, ಬಂಗಾರವೆಲ್ಲಾ ನನ್ನದು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು