Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇದು ಪ್ರತಿಯೊಂದು ದೊಡ್ಡ ಪ್ರಾಣಿಯನ್ನೂ ದಿಟ್ಟಿಸಿ ನೋಡುವುದು, ಸೊಕ್ಕಿದ ಮೃಗಗಳಿಗೆಲ್ಲಾ ರಾಜನಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ದಿಟ್ಟಿಸಿ ನೋಡುತ್ತದೆ ಘನಪ್ರಾಣಿಗಳನ್ನೆಲ್ಲಾ ರಾಜನಾಗಿರುತ್ತದೆ ಸೊಕ್ಕಿನ ಮೃಗಗಳಿಗೆಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇದು ಪ್ರತಿಯೊಂದು ದೊಡ್ಡ ಪ್ರಾಣಿಯನ್ನೂ ದಿಟ್ಟಿಸಿ ನೋಡುವದು, ಸೊಕ್ಕಿದ ಮೃಗಗಳಿಗೆಲ್ಲಾ ರಾಜನಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅತ್ಯಂತ ಗರ್ವಿಷ್ಠ ಪ್ರಾಣಿಗಳನ್ನೂ ಅದು ಕಡೆಗಣಿಸುವುದು. ಅದು ಕ್ರೂರಪ್ರಾಣಿಗಳಿಗೆಲ್ಲಾ ರಾಜನಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಇದು ಪ್ರತಿ ಅಹಂಕಾರಿಯನ್ನು ನೋಡುವುದು; ಗರ್ವಪಡುವ ಎಲ್ಲರ ಮೇಲೆ ಇದು ರಾಜನಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:34
11 ತಿಳಿವುಗಳ ಹೋಲಿಕೆ  

“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.


ಆದುದರಿಂದ ಅವರಿಗೆ ಗರ್ವವು ಕಂಠಮಾಲೆಯಾಗಿದೆ; ಬಲಾತ್ಕಾರವು ಉಡುಪಾಗಿದೆ.


ಸೊಕ್ಕಿದ ಮೃಗಗಳು ಅದನ್ನು ತುಳಿದಿಲ್ಲ, ಸಿಂಹವು ಆ ಮಾರ್ಗವನ್ನು ತುಳಿದಿಲ್ಲ.


ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು.


ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ, ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!


ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ.


ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


ಆಗ ಯೋಬನು ಯೆಹೋವನಿಗೆ ಪ್ರತ್ಯುತ್ತರವಾಗಿ ಹೀಗೆಂದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು