ಯೋಬ 42:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ ಎಲ್ಲಾ ಅಕ್ಕತಂಗಿಯರೂ ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೋಬನ ಸಹೋದರಸಹೋದರಿಯರೂ ಅವನ ಪರಿಚಯಸ್ಥರೂ ಅವನ ಮನೆಗೆ ಬಂದರು; ಅವನೊಂದಿಗೆ ಊಟ ಮಾಡಿದರು; ಯೆಹೋವನು ಅವನಿಗೆ ಬಹಳ ಕಷ್ಟವನ್ನು ಬರಮಾಡಿದ್ದರಿಂದ ಅವರು ಮರುಕದಿಂದ ಅವನನ್ನು ಸಂತೈಸಿದರು. ಪ್ರತಿಯೊಬ್ಬರು ಯೋಬನಿಗೆ ಒಂದು ಬೆಳ್ಳಿಯ ನಾಣ್ಯವನ್ನೂ ಒಂದು ಚಿನ್ನದ ಉಂಗುರವನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು. ಅಧ್ಯಾಯವನ್ನು ನೋಡಿ |