ಯೋಬ 42:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ, ಆರು ಸಾವಿರ ಒಂಟೆಗಳೂ, ಒಂದು ಸಾವಿರ ಜೋಡಿ ಎತ್ತುಗಳೂ, ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಹೆಚ್ಚಾಗಿ ಆಶೀರ್ವದಿಸಿದನು; ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೋಡಿ ಎತ್ತುಗಳೂ ಒಂದು ಸಾವಿರ ಹೆಣ್ಣುಕತ್ತೆಗಳೂ ಉಂಟಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ಯೋಬನ ಜೀವಿತದ ಅಂತಿಮ ಸ್ಥಿತಿಯನ್ನು ಮೊದಲನೆ ಸ್ಥಿತಿಗಿಂತಲೂ ಹೆಚ್ಚಾಗಿ ಆಶೀರ್ವದಿಸಿದನು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಒಂದು ಸಾವಿರ ಜೊತೆ ಎತ್ತುಗಳೂ ಒಂದು ಸಾವಿರ ಹೆಣ್ಣು ಕತ್ತೆಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು. ಅಧ್ಯಾಯವನ್ನು ನೋಡಿ |