Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನೀನು ಕೂಗಿದರೆ, ನಿನಗೆ ಉತ್ತರಕೊಡುವವರುಂಟೋ? ಪರಿಶುದ್ಧ ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಕೂಗಿ ನೋಡು, ಯಾರಿದ್ದಾರೆ ಉತ್ತರಕೊಡುವವರು ನಿನಗೆ? ಈಗ ಯಾರ ಕಡೆಗೆ, ಯಾವ ದೇವದೂತರ ಕಡೆಗೆ ತಿರುಗುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀನು ಕೂಗಿದರೆ ನಿನಗೆ ಉತ್ತರಕೊಡುವವರುಂಟೋ? ದೇವದೂತರಲ್ಲಿ ಯಾರನ್ನು ಆಶ್ರಯಿಸುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಯೋಬನೇ, ನೀನು ಕೂಗಿಕೊಂಡರೂ ನಿನಗೆ ಉತ್ತರಿಸುವವರಿಲ್ಲ; ದೇವದೂತರುಗಳಲ್ಲಿ ಯಾರನ್ನು ಆಶ್ರಯಿಸಿಕೊಳ್ಳುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಈಗ ನೀನು ಕರೆದರೆ, ನಿನಗೆ ಉತ್ತರ ಕೊಡುವವರು ಇದ್ದಾರೋ? ಪರಿಶುದ್ಧರಲ್ಲಿ ಯಾರ ಕಡೆಗೆ ನೀನು ತಿರುಗಿಕೊಳ್ಳುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:1
12 ತಿಳಿವುಗಳ ಹೋಲಿಕೆ  

ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು.


ಆಹಾ, ಆತನು ತನ್ನ ಸೇವಕರಲ್ಲಿಯೂ ನಂಬಿಕೆಯನ್ನಿಡುವುದಿಲ್ಲ, ತನ್ನ ದೂತರ ಮೇಲೆ ತಪ್ಪುಹೊರಿಸುತ್ತಾನೆ.


ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,


ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ.


ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು,


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.


ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.


ಕೃಪೆಮಾಡಿ ಈಡನ್ನು ಕೊಡು, ನನಗಾಗಿ ನೀನೇ ನಿನ್ನ ಹತ್ತಿರ ಹೊಣೆಯಾಗು, ನನ್ನ ಕೈ ಮೇಲೆ ಕೈ ಹಾಕತಕ್ಕವರು ನನಗೆ ಇನ್ನಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು