ಯೋಬ 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಸಿದವನು ಅವರ ಬೆಳೆಯನ್ನು ಮುಳ್ಳುಬೇಲಿಹಾಕಿದ್ದರೂ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬಾಯಿ ತೆರೆದು ಕಾದಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಸಿದವರು ಅವನ ಬೆಳೆಯನು ತಿಂದುಬಿಡುವರು ಮುಳ್ಳುಬೇಲಿ ಹಾಕಿದ್ದರೂ ಅದನು ತಿಂದುಬಿಡುವರು ಅವನ ಸೊತ್ತನು ನುಂಗಲು ಬಾಯ್ದೆರೆದು ಕಾದಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹಸಿದವನು ಅವರ ಬೆಳೆಯನ್ನು ಮುಳ್ಳು ಬೇಲಿಯೊಳಗಿಂದಲೇ ತಿಂದುಬಿಡುವನು. ಅವರ ಸೊತ್ತನ್ನು ನುಂಗಲು ಬೋನು ಬಾಯಿ ತೆರೆದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಹಸಿದಿರುವವರು ಆ ಮೂರ್ಖನ ಬೆಳೆಗಳನ್ನು ತಿಂದುಬಿಟ್ಟರು. ಅವರು ಬೇಲಿಗಳ ಮಧ್ಯದಲ್ಲಿ ಬೆಳೆಯುತ್ತಿರುವ ಧಾನ್ಯವನ್ನು ಸಹ ತಿಂದುಬಿಟ್ಟರು. ದುರಾಶೆಯುಳ್ಳವರು ಅವರ ಆಸ್ತಿಯನ್ನೆಲ್ಲಾ ಕಸಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಸಿದವರು ಅವನ ಪೈರನ್ನು ತಿಂದುಬಿಡುವರು; ಮುಳ್ಳುಬೇಲಿ ಹಾಕಿದ್ದರೂ ಅದನ್ನು ತೆಗೆದುಕೊಳ್ಳುವರು; ಅವನ ಆಸ್ತಿಯನ್ನು ಬಾಯಾರಿಕೆಯಾದವರು ನುಂಗಿಬಿಡುವರು. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.