Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಬ್ಬನು ಮನಗುಂದಿ ಸರ್ವಶಕ್ತನಾದ ದೇವರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ; ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಂಕಟದಲ್ಲಿ ಆಗದಾ ನೆಂಟನಿಗೆ ಸರ್ವಶಕ್ತನಲ್ಲಿ ಭಯಭಕ್ತಿ ಇರುವುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಬ್ಬನು ಮನಗುಂದಿ ಸರ್ವಶಕ್ತನ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ ಅವನ ವಿುತ್ರನು ಅವನಿಗೆ ದಯೆ ತೋರಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಕಷ್ಟದಲ್ಲಿರುವವನಿಗೆ ಅವನ ಸ್ನೇಹಿತನು ದಯೆತೋರಬೇಕು; ಒಂದುವೇಳೆ ಅವನು ಸರ್ವಶಕ್ತನಾದ ದೇವರಿಗೆ ವಿಮುಖನಾಗಿದ್ದರೂ ಅವನ ಸ್ನೇಹಿತನು ನಂಬಿಗಸ್ತನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಒಬ್ಬನು ಸರ್ವಶಕ್ತರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ, ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:14
16 ತಿಳಿವುಗಳ ಹೋಲಿಕೆ  

ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.


ಯಾವನಾದರೂ ಬಲಹೀನನಾಗಿದ್ದರೆ ನಾನೂ ಅವನೊಂದಿಗೆ ಬಲಹೀನನಾಗದೆ ಇದ್ದೆನೋ? ಯಾವನಾದರೂ ತಪ್ಪಿಹೋಗಿದ್ದಲ್ಲಿ ನಾನು ಸಂತಾಪಪಡದೆ ಇದ್ದೆನೋ?


ನನ್ನ ಮಿತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


ನಾನೂ ಬಾಯಿಮಾತಿಗಾಗಿ ನಿಮ್ಮನ್ನು ಧೈರ್ಯಗೊಳಿಸಿ, ತುಟಿಗಳ ಆದರಣೆಯಿಂದ ನಿಮ್ಮ ದುಃಖವನ್ನು ಶಮನಪಡಿಸಬಹುದಾಗಿತ್ತು.


ಇದಲ್ಲದೆ ನೀನು ದೇವರ ಭಯವನ್ನು ಹಾಳುಮಾಡುತ್ತಿರುವೆ, ನೀನು ನನ್ನನ್ನು ಪಾತಾಳಕ್ಕೆ ತಳ್ಳಿ ನನ್ನ ದೇವಭಕ್ತಿಯನ್ನು ಕ್ಷಯಗೊಳಿಸುತ್ತೀ.


ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.


ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.


“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,


ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು, ಮುರುಕಹಲ್ಲು ಮತ್ತು ಜಾರುವ ಕಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು