Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದಯವಿಟ್ಟು ನನ್ನ ವಿಚಾರಣೆಗೆ ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆ ಮಾಡಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದಯಮಾಡಿ ಮತ್ತೆ ಆಲೋಚಿಸಿರಿ ಅನ್ಯಾಯವಾಗದಂತೆ ಮರಳಿ ವಿಮರ್ಶಿಸಿರಿ ನನ್ನ ಸತ್ಯತೆ ತಿಳಿಯುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದಯವಿಟ್ಟು ನನ್ನ ವಿಚಾರಣೆಗೆ ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆಗೆ ತಿರುಗಿಕೊಳ್ಳಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದ್ದರಿಂದ ಈಗ ನಿಮ್ಮ ಮನಸ್ಸನ್ನು ಬದಲಾಯಿಸಿರಿ, ಅನ್ಯಾಯಸ್ಥರಾಗಿರಬೇಡಿ. ಹೌದು, ಮತ್ತೊಮ್ಮೆ ಯೋಚಿಸಿರಿ. ನಾನೇನೂ ತಪ್ಪು ಮಾಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಕರುಣೆ ತೋರಿಸಿರಿ, ಅನ್ಯಾಯವಾಗದಿರಲಿ; ಪುನಃ ಯೋಚಿಸಿರಿ, ನನ್ನ ಪ್ರಾಮಾಣಿಕತೆಯು ಪ್ರಶ್ನಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:29
11 ತಿಳಿವುಗಳ ಹೋಲಿಕೆ  

ಆದರೆ ನೀವೆಲ್ಲರೂ ಮತ್ತೆ ವಾದಕ್ಕೆ ಬನ್ನಿರಿ, ನಿಮ್ಮಲ್ಲಿ ಒಬ್ಬ ಜ್ಞಾನಿಯನ್ನಾದರೂ ಕಾಣೆನು.


ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.


ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.


ಯೋಬನು, ‘ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.


ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು.


ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ.


ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬುದಾಗಿ ನಿರ್ಣಯವಾಗುವುದೆಂದು ನನಗೆ ಗೊತ್ತೇ ಇದೆ.


ಹೀಗಾದರೆ ನನ್ನ ನ್ಯಾಯವನ್ನು ತಿರುಗಿಸಿಬಿಟ್ಟು ನನ್ನ ಸುತ್ತಲೂ ತನ್ನ ಬಲೆಯನ್ನೊಡ್ಡಿದವನು ದೇವರೇ ಎಂದು ತಿಳಿದುಕೊಳ್ಳಿರಿ.


ಆಗ ಯೋಬನು ಯೆಹೋವನಿಗೆ ಪ್ರತ್ಯುತ್ತರವಾಗಿ ಹೀಗೆಂದನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು