Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಪ್ಪೆಯನ್ನು ಉಪ್ಪಿಲ್ಲದೆ ತಿನ್ನಬಹುದೇ? ಮೊಟ್ಟೆಯಲ್ಲಿರುವ ಲೋಳೆಯು ರುಚಿಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಉಪ್ಪಿಲ್ಲದ ಸಪ್ಪೆಯನು ತಿನ್ನುತ್ತೇವೆಯೆ? ಮೊಟ್ಟೆಯೊಳಗಿನ ಲೋಳೆಯಲಿ ರುಚಿಯಿದೆಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಪ್ಪೆಯನ್ನು ಉಪ್ಪಿಲ್ಲದೆ ತಿನ್ನಬಹುದೇ, ಮೊಟ್ಟೆಯಲ್ಲಿರುವ ಲೋಳೆಯು ರುಚಿಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಊಟವನ್ನು ಉಪ್ಪಿಲ್ಲದೆ ತಿನ್ನುವರೇ? ಮೊಟ್ಟೆಯ ಲೋಳೆಗೆ ರುಚಿಯಿದೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ರುಚಿ ಇಲ್ಲದ ಆಹಾರನ್ನು ಉಪ್ಪಿಲ್ಲದೆ ತಿನ್ನಬಹುದೋ? ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿಯುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 6:6
13 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು.


“ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?


ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.


ನಾಲಿಗೆಯು ಆಹಾರವನ್ನು ರುಚಿನೋಡುವಂತೆ, ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.


“ಇಂಥಾ ಮಾತುಗಳನ್ನು ಬಹಳವಾಗಿ ಕೇಳಿದ್ದೇನೆ, ನೀವೆಲ್ಲರೂ ಬೇಸರಿಕೆಯನ್ನು ಹುಟ್ಟಿಸುವ ಮಾತನಾಡುವಿರಿ. ಆದರಣೆಗೆ ಬದಲಾಗಿ ಬಾಧಿಸುವವರು ನೀವು.


ಬಾಯಿಯು ಆಹಾರವನ್ನು ರುಚಿ ನೋಡುವ ಪ್ರಕಾರ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.


ರುಚಿಗೆ ನನ್ನ ನಾಲಿಗೆಯು ತಪ್ಪುಮಾಡುತ್ತದೋ? ಸತ್ಯಾಸತ್ಯಗಳ, ನ್ಯಾಯಾನ್ಯಾಯಗಳನ್ನು ವಿವೇಚಿಸುವ ಸಾಮರ್ಥ್ಯ ನನಗಿಲ್ಲವೇ?


ನೀತಿಯ ನುಡಿಗಳು ಎಷ್ಟೋ ಖಂಡಿತವಾಗಿವೆ, ಆದರೆ ನಿಮ್ಮ ಖಂಡನೆಯು ನಿರಾರ್ಥಕ?


“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.


ಕಾಡುಕತ್ತೆಗೆ ಹುಲ್ಲಿರಲು ಅರಚೀತೇ? ಎತ್ತಿಗೆ ಮೇವಿರಲು ಕೂಗೀತೇ?


ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು