Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನಂತೂ ಬಾಯಿಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತನಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಾಯಿ ಮುಚ್ಚಿಡಲಾಗದು ನನ್ನಿಂದ ಮಾತಾಡುತ್ತೇನೆ ಆತ್ಮವೇದನೆಯಿಂದ ಪ್ರಲಾಪಿಸುತ್ತೇನೆ ಮನೋವ್ಯಥೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನಂತೂ ಬಾಯಿಮುಚ್ಚುವದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ಮನೋವ್ಯಥೆಯಿಂದ ಪ್ರಲಾಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದ್ದರಿಂದ ನಾನು ಮೌನವಾಗಿರುವುದಿಲ್ಲ, ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಆದ್ದರಿಂದ ನಾನು ನನ್ನ ಬಾಯಿ ಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ನನ್ನ ಆತ್ಮದ ಕಹಿಯಲ್ಲಿ ನಾನು ವಾದಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:11
20 ತಿಳಿವುಗಳ ಹೋಲಿಕೆ  

ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ಹನ್ನಳು ಬಹುದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನಿಗೆ,


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.


ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ! ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು.


ಮತ್ತೊಬ್ಬನು ಸ್ವಲ್ಪವೂ ಸುಖಾನುಭವವಿಲ್ಲದೆ, ಮನೋವ್ಯಥೆಪಡುತ್ತಾ ಸಾಯುವನು.


ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಬಹಳವಾಗಿ ಕಣ್ಣೀರಿಡುತ್ತಾ ಹೃದಯದ ಬಹು ಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನೇ ಹೊರತು ನಿಮ್ಮನ್ನು ನೋಯಿಸುವುದಕ್ಕಾಗಿಯಲ್ಲ.


ಯೇಸು ತೀವ್ರವಾದ ಮನೋವ್ಯಥೆಯುಳ್ಳವನಾಗಿ, ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ, ಆತನ ಬೆವರು ರಕ್ತದ ಹನಿಗಳೋಪಾದಿಯಲ್ಲಿ ನೆಲಕ್ಕೆ ಬೀಳುತ್ತಿತ್ತು.


ನಾನು ಮಾತನಾಡಿದರೂ, ನನ್ನ ಮನೋವ್ಯಥೆಯು ಶಾಂತವಾಗುವುದಿಲ್ಲ. ಸುಮ್ಮನಾದರೂ, ಕಷ್ಟ ನಿವಾರಣೆಯಾಗುವುದಿಲ್ಲ.


ಸುಮ್ಮನಿರಿ, ನನ್ನನ್ನು ಬಿಡಿರಿ, ನಾನು ಮಾತನಾಡಬೇಕು, ನನಗೇನಾದರೂ ಆಗಲಿ.


ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು.


ಬರೀ ಮಾತುಗಳಿಂದ ಖಂಡಿಸಬೇಕೆನ್ನುವಿರೋ? ದೆಸೆಗೆಟ್ಟವನ ಮಾತುಗಳು ಗಾಳಿಗೆ ಹೋಗತಕ್ಕವುಗಳಲ್ಲವೇ?


ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.


ನನ್ನ ಹೃದಯವು ಆತಂಕದಿಂದ ಕೂಡಿತ್ತು; ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. ಆಗ ನಾನು ಬಾಯಿ ಬಿಟ್ಟು,


ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು, ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ,


“ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?


ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ. ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು