Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಯಮಾಡಿ, ಪೂರ್ವಿಕರನ್ನು ವಿಚಾರಿಸಿ, ಅವರ ಪೂರ್ವಿಕರು ಕಂಡುಕೊಂಡದ್ದಕ್ಕೂ ಮನಸ್ಸಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ವಿಚಾರಿಸಿ ನೋಡು ಪುರಾತನ ಕಾಲವನು ಧ್ಯಾನಿಸಿ ನೋಡು ಪೂರ್ವಜರ ಅನುಭವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಯಮಾಡಿ ಪೂರ್ವಿಕರನ್ನು ವಿಚಾರಿಸಿ ಅವರ ಪಿತೃಗಳು ಕಂಡುಕೊಂಡದ್ದಕ್ಕೂ ಮನಸ್ಸಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಪೂರ್ವಿಕರನ್ನು ವಿಚಾರಿಸಿ ಅವರ ಪಿತೃಗಳು ಕಲಿತುಕೊಂಡದ್ದನ್ನು ತಿಳಿದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಲಿತಿದ್ದನ್ನು ಕಂಡುಕೊಳ್ಳುವುದಕ್ಕೆ ಸಿದ್ಧನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:8
15 ತಿಳಿವುಗಳ ಹೋಲಿಕೆ  

ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲಿ ಪರದೇಶಿಯರು ಅವರ ನಾಡನ್ನು ಹಾದುಹೋಗುವಂತಿರಲಿಲ್ಲ.


ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು.


ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.


ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.


ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.


ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.


ತಲೆನರೆತು ನಿನ್ನ ತಂದೆಗಿಂತ ವೃದ್ಧನಾದ ಮುದುಕನು ನಮ್ಮಲ್ಲಿದ್ದಾನೆ.


ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದಿರ್ಘಾಷ್ಯರಲ್ಲಿ ವಿವೇಕವಿದೆ.


ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, “ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?” ಎಂದನು.


ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ,


ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?


ಇಗೋ, ಇವುಗಳನ್ನೆಲ್ಲಾ ನನ್ನ ಕಣ್ಣು ಕಂಡಿದೆ, ಕಿವಿಯು ಕೇಳಿ ಗ್ರಹಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು