ಯೋಬ 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಯನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ; ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸುತ್ತಾರೆ. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.