Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಸಮಸ್ತ ದುಃಖದುಗುಡಗಳ ನೆನಪು ನನಗೆ ತರುತ್ತವೆ ದಿಗಿಲು ನನಗೆ ಗೊತ್ತು, ನೀ ನನ್ನನು ನಿರಪರಾಧಿ ಎಂದೆಣಿಸಲಾರೆಯೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದೆಣಿಸುವದಿಲ್ಲವೆಂದು ತಿಳಿದುಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನನ್ನ ಎಲ್ಲಾ ಸಂಕಟಗಳಿಂದ ಇನ್ನೂ ಭಯಗೊಂಡಿರುವೆ. ಯಾಕೆಂದರೆ ನನ್ನನ್ನು ಅಪರಾಧಿಯೆಂದು ದೇವರು ಹೇಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನನಗಾದ ವ್ಯಥೆಗಳಿಗೆಲ್ಲಾ ನಾನು ಇನ್ನೂ ಹೆದರುತ್ತಿದ್ದೇನೆ; ದೇವರು ನನ್ನನ್ನು ನಿರಪರಾಧಿ ಎಂದು ಎಣಿಸುವುದಿಲ್ಲವೆಂದು ಸಹ ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:28
13 ತಿಳಿವುಗಳ ಹೋಲಿಕೆ  

ನಿನ್ನ ಭಯದಿಂದ ನನ್ನ ದೇಹದ ಮಾಂಸವು ಕಂಪಿಸುತ್ತದೆ, ನಿನ್ನ ನ್ಯಾಯವಿಧಿಗಳಿಗೆ ಹೆದರುತ್ತೇನೆ. ಆಯಿನ್.


ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?


ಈ ವಿಷಯವನ್ನು ನೆನಪಿಗೆ ತಂದುಕೊಂಡ ಹಾಗೆಲ್ಲಾ, ನಡುಕವು ನನ್ನ ಮಾಂಸವನ್ನು ಹಿಡಿಯುತ್ತದೆ.


ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ!


ಅದೇನೆಂದರೆ, ನಾನು ತಪ್ಪುಮಾಡಿದರೆ ನೀನು ಗಮನಿಸುತ್ತಿ; ನನ್ನ ದೋಷವನ್ನು ಕ್ಷಮಿಸುವುದಿಲ್ಲ.


“ನೀನು ಹೇಳಿದ್ದು ಸತ್ಯವೇ ಸರಿ. ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?


ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.


ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವುದು. ನಾನು ಯಾವುದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವುದು.


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ನಾನು ಮಾತನಾಡಿದರೂ, ನನ್ನ ಮನೋವ್ಯಥೆಯು ಶಾಂತವಾಗುವುದಿಲ್ಲ. ಸುಮ್ಮನಾದರೂ, ಕಷ್ಟ ನಿವಾರಣೆಯಾಗುವುದಿಲ್ಲ.


ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು, ನನ್ನನ್ನು ಶತ್ರುವೆಂದು ಎಣಿಸಿಕೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು