Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನು ಹಿಮದಿಂದ ಸ್ನಾನಮಾಡಿದರೂ, ಚೌಳಿನಿಂದ ನನ್ನ ಕೈಗಳನ್ನು ತೊಳಕೊಂಡರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹಿಮದಿಂದ ನಾನು ಸ್ನಾನಮಾಡಿದರೂ ಚೌಳಿನಿಂದ ನಾನು ಕೈತೊಳೆದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾನು ಹಿಮದಿಂದ ಸ್ನಾನಮಾಡಿದರೂ ಚೌಳಿನಿಂದ ಕೈ ತೊಳಕೊಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಾನು ಹಿಮದಿಂದ ಸ್ನಾನಮಾಡಿದರೂ ಸಾಬೂನಿನಿಂದ ಕೈತೊಳೆದುಕೊಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಾನು ಹಿಮದ ನೀರಿನಲ್ಲಿ ಸ್ನಾನಮಾಡಿ, ಸಾಬೂನಿನಿಂದ ನನ್ನ ಕೈಗಳನ್ನು ತೊಳೆದುಕೊಂಡರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:30
11 ತಿಳಿವುಗಳ ಹೋಲಿಕೆ  

ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.


ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ನನ್ನ ನಡತೆಯಲ್ಲಿ ದಾರಿತಪ್ಪಿದ್ದರೆ, ನನ್ನ ಹೃದಯವು ಕಂಡಕಂಡದ್ದನ್ನು ಹಿಂಬಾಲಿಸಿದ್ದರೆ, ನನ್ನ ಕೈಗಳಲ್ಲಿ ಕಲ್ಮಷವು ಅಂಟಿಕೊಂಡಿದ್ದರೆ,


ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ.


ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು, ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ?


ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು