Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆತ ಆಜ್ಞೆ ಮಾಡಿದ್ದೇ ಆದರೆ ಸೂರ್ಯನು ಉದಯಿಸನು ಮುದ್ರೆ ಹಾಕಿದ್ದೇ ಆದರೆ ನಕ್ಷತ್ರವೂ ಮಿನುಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹುಟ್ಟಬೇಡವೆಂದು ಆತನು ಅಪ್ಪಣೆಕೊಟ್ಟರೆ ಸೂರ್ಯನು ಹುಟ್ಟುವದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ಆಜ್ಞಾಪಿಸಿದರೆ, ಆತನ ಆಜ್ಞೆಯಂತೆಯೇ ಸೂರ್ಯೋದಯವಾಗದು. ನಕ್ಷತ್ರಗಳು ಪ್ರಕಾಶಿಸದಂತೆ ಆತನು ಅವುಗಳನ್ನು ಮುಚ್ಚಿಟ್ಟು ಮುದ್ರೆ ಹಾಕಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ಸೂರ್ಯನಿಗೆ ಪ್ರಕಾಶಿಸದಂತೆ ಅಪ್ಪಣೆ ಕೊಟ್ಟರೆ, ಪ್ರಕಾಶಿಸುತ್ತಿರಲಿಲ್ಲ; ನಕ್ಷತ್ರಗಳಿಗೆ ಮುದ್ರೆ ಹಾಕಿದ್ದರೆ, ನಕ್ಷತ್ರವೂ ಮಿನುಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:7
13 ತಿಳಿವುಗಳ ಹೋಲಿಕೆ  

ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.


ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.


“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು, ಪ್ರತಿಯೊಬ್ಬನ ಕೈಗಳನ್ನು ಬಲಪಡಿಸುತ್ತಾನೆ.


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.


ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್‌ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯನು ಮುಳುಗಲು ಆತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು