Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಕ್ಷತ್ರಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ, ದಕ್ಷಿಣ ದಿಕ್ಕಿನ ನಕ್ಷತ್ರಗೃಹಗಳನ್ನೂ ನಿರ್ಮಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ದಕ್ಷಿಣದ ನಕ್ಷತ್ರಗ್ರಹಗಳನೂ ಸಪ್ತರ್ಷಿಮಂಡಲವನೂ ಮೃಗಶಿರವನೂ ಕೃತ್ತಿಕೆಯನೂ ನಿರ್ಮಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಪ್ತರ್ಷಿಗಳನ್ನೂ ಮೃಗಶಿರವನ್ನೂ ಕೃತ್ತಿಕೆಯನ್ನೂ ತೆಂಕಣ ದಿಕ್ಕಿನ ನಕ್ಷತ್ರಗ್ರಹಗಳನ್ನೂ ನಿರ್ಮಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆತನೇ ಬೇರ್, ಒರೈಯನ್ ಮತ್ತು ಪ್ಲೈಯಡ್ಸ್ ಎಂಬ ನಕ್ಷತ್ರಸಮೂಹಗಳನ್ನು ಸೃಷ್ಟಿಮಾಡಿದನು. ದಕ್ಷಿಣ ಆಕಾಶದಲ್ಲಿ ನಕ್ಷತ್ರವ್ಯೂಹಗಳನ್ನು ಸೃಷ್ಟಿಸಿದವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಪ್ತರ್ಷಿಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ ದಕ್ಷಿಣ ದಿಕ್ಕಿನ ನಕ್ಷತ್ರಗ್ರಹಗಳನ್ನೂ ನಿರ್ಮಿಸಿದವರು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:9
8 ತಿಳಿವುಗಳ ಹೋಲಿಕೆ  

ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!


ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.


ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.


ಅಲ್ಲಿಂದ ಮುಂದುವರೆದು ರೇಗಿಯ ಪಟ್ಟಣಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣ ಗಾಳಿ ಬೀಸಿದ್ದರಿಂದ, ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.


ನೀನು ನಿನ್ನ ಮೇಲಂತಸ್ತುಗಳಿಂದ ಪರ್ವತಗಳಿಗೆ ನೀರು ಕೊಡುತ್ತೀ; ನಿನ್ನ ಕಾರ್ಯಫಲದಿಂದ ಭೂಮಿಯು ತೃಪ್ತಿಹೊಂದುತ್ತದೆ.


ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ಆತನ ಭಂಡಾರದ ದಕ್ಷಿಣದಿಕ್ಕಿನಿಂದ ಬಿರುಗಾಳಿಯೂ, ಉತ್ತರದಿಕ್ಕಿನಿಂದ ಚಳಿಗಾಳಿಯೂ ಬರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು