ಯೋಯೇಲ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಉಪವಾಸ ದಿನವನ್ನು ಏರ್ಪಡಿಸಿರಿ; ಸಂಘವನ್ನು ಕೂಡಿಸಿರಿ; ಹಿರಿಯರನ್ನೂ ಸಮಸ್ತ ದೇಶನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ ಯೆಹೋವನಿಗೆ ಮೊರೆಯಿಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ. ಅಧ್ಯಾಯವನ್ನು ನೋಡಿ |