Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ. ಕುರಿಹಿಂಡುಗಳು ಕಷ್ಟಪಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪಶುಪ್ರಾಣಿಗಳು ನರಳುತ್ತಿವೆ; ದನಕರುಗಳು ಮೇವಿಲ್ಲದೆ ಕಂಗಾಲಾಗಿವೆ; ಕುರಿಮಂದೆಗಳು ಕೂಡ ಕಂಗೆಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಯ್ಯೋ, ಪಶುಗಳು ಎಷ್ಟೋ ನರಳುತ್ತವೆ! ಮೇವಿಲ್ಲದ ಕಾರಣ ದನದ ಮಂದೆಗಳು ಭ್ರಮೆಗೊಂಡಿವೆ, ಕುರಿಯ ಹಿಂಡುಗಳು ದಂಡನೆಗೆ ಗುರಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪ್ರಾಣಿಗಳು ಹಸಿವಿನಿಂದ ನರಳಾಡುತ್ತಿವೆ. ಪ್ರಾಣಿಗಳ ಹಿಂಡು ಗಲಿಬಿಲಿಗೊಂಡು ಅಡ್ಡಾಡುತ್ತವೆ. ಅವುಗಳಿಗೆ ತಿನ್ನಲು ಹುಲ್ಲು ಇಲ್ಲ. ಕುರಿಗಳು ಸಾಯುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪಶುಗಳು ನರಳುತ್ತವೆ. ದನದ ಹಿಂಡುಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ; ಕುರಿಮಂದೆಗಳು ಸಹ ಕಷ್ಟಪಡುತ್ತಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:18
10 ತಿಳಿವುಗಳ ಹೋಲಿಕೆ  

ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ.


ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ


ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿಹೋಗಿವೆ. ಕಾಡಿನ ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.


ಅಹಾಬನು ಅವನಿಗೆ, “ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು” ಎಂದು ಹೇಳಿದನು.


ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.


ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”


ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ, ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ನಿಮ್ಮ ನಿಮಿತ್ತವೇ ಆಕಾಶವು ಇಬ್ಬನಿಯನ್ನು ತಡೆದುಬಿಟ್ಟಿದೆ, ಭೂಮಿಯು ತನ್ನ ಫಲವನ್ನು ನಿಲ್ಲಿಸಿಬಿಟ್ಟಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು