Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಇಂತೆನ್ನುತ್ತಾನೆ - ಈಗಲಾದರೋ ನೀವು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಂಡು ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದು ಯೆಹೋವನ ಸಂದೇಶ: “ನಿಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಬನ್ನಿರಿ, ನೀವು ದುಷ್ಟತ್ವವನ್ನು ನಡಿಸಿರುವದರಿಂದ ದುಃಖಿಸಿರಿ, ಅಳಿರಿ, ಉಪವಾಸ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:12
39 ತಿಳಿವುಗಳ ಹೋಲಿಕೆ  

ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.


ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.


ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.


ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.


“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?


ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.


ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.


‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.


“ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.


ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.


ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.


ಪರಲೋಕದಿಂದ ನೀನು ಲಾಲಿಸಿ ನಿನ್ನ ಸೇವಕರು ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗಳಿಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.


ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.


“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.


ಅವರು ಒಂದು ವೇಳೆ ಯೆಹೋವನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಯೆಹೋವನು ಈ ಜನರ ಮೇಲೆ ತೀರಿಸಬೇಕೆಂದು ಪ್ರಕಟಿಸಿರುವ ಕೋಪ ಮತ್ತು ರೋಷಗಳು ಅಪಾರವಾಗಿವೆ” ಎಂದು ಅಪ್ಪಣೆಕೊಟ್ಟನು.


ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು