Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಜನರನ್ನು ಒಟ್ಟುಗೂಡಿಸಿರಿ; ಸಭೆಯನ್ನು ಏರ್ಪಡಿಸಿರಿ; ವೃದ್ಧರನ್ನು, ಮಕ್ಕಳನ್ನು, ಮೊಲೆಗೂಸುಗಳನ್ನು ಕರೆತನ್ನಿರಿ. ವಧೂವರರು ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಜನರನ್ನು ಒಟ್ಟಿಗೆ ಬರಮಾಡಿರಿ, ಕೂಟವನ್ನು ಏರ್ಪಡಿಸಿರಿ, ವೃದ್ಧರನ್ನು ಕೂಡಿಸಿರಿ, ಮಕ್ಕಳನ್ನೂ ಮೊಲೆಕೂಸುಗಳನ್ನೂ ಸೇರಿಸಿರಿ; ವಧೂವರರೂ ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ವಿಶೇಷ ಕೂಟಕ್ಕಾಗಿ ಜನರನ್ನು ಒಟ್ಟಾಗಿ ಕೂಡಿಸಿರಿ. ಪ್ರಾಯಸ್ಥರನ್ನು ಕೂಡಿಸಿರಿ. ಮಕ್ಕಳನ್ನೂ ಕೂಡಿಸಿರಿ. ಮೊಲೆಹಾಲು ಕುಡಿಯುವ ಶಿಶುಗಳನ್ನೂ ಒಟ್ಟಾಗಿ ಸೇರಿಸಿರಿ. ವಧುವರರು ತಮ್ಮ ಶೋಭನದ ಕೋಣೆಯಿಂದ ಹೊರಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಜನರನ್ನು ಕೂಡಿಸಿರಿ; ಸಭೆಯನ್ನು ಪವಿತ್ರಗೊಳಿಸಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಹಸುಗೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳಗಿಂದಲೂ ಮದುಮಗಳು ತನ್ನ ಕೊಠಡಿಯೊಳಗಿಂದಲೂ ಹೊರಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:16
21 ತಿಳಿವುಗಳ ಹೋಲಿಕೆ  

ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.


ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.


ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.


ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.


ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.


ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,


“ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ


ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.


ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.


ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ” ಎಂದು ಆಜ್ಞಾಪಿಸಿದನು.


ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ ಪೂರ್ವಿಕರ ದೇವರಾದ ಯೆಹೋವನನ್ನು ಹುಡುಕಬೇಕೆಂದು ಮನಸ್ಸುಮಾಡಿರುವವರಿಗೆಲ್ಲರಿಗೂ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದನು.


ಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಇದ್ದುದರಿಂದ ಅಶುದ್ಧರಾದವರೆಲ್ಲರ, ಪಸ್ಕಹಬ್ಬದ ಯಜ್ಞಪಶುಗಳು ಯೆಹೋವನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.


ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.


ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.


ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.


ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ, ಚಿಕ್ಕವರಿಗೂ, ಪರದೇಶದವರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಅದನ್ನು ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು