Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನ ಸೇವಕರಾದ ಯಾಜಕರು ದ್ವಾರಮಂಟಪಕ್ಕೂ ಯಜ್ಞವೇದಿಗೂ ನಡುವೆ ಅಳುತ್ತಾ - ಯೆಹೋವನೇ, ನಿನ್ನ ಜನರನ್ನು ಕರುಣಿಸು; ಅನ್ಯಜನಾಂಗಗಳು ಅವರ ಹೆಸರನ್ನು ಕಟ್ಟುಗಾದೆಯಾಗಿ ಎತ್ತುವ ನಿಂದೆಗೆ ನಿನ್ನ ಸ್ವಾಸ್ತ್ಯದವರನ್ನು ಗುರಿಮಾಡಬೇಡ; ಅವರ ದೇವರು ಎಲ್ಲಿ ಎಂಬ ಮಾತು ಮ್ಲೇಚ್ಫರಲ್ಲಿ ಏಕೆ ಸಲ್ಲಬೇಕು ಎಂದು ವಿಜ್ಞಾಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:17
42 ತಿಳಿವುಗಳ ಹೋಲಿಕೆ  

ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


“ಅವರ ದೇವರು ಎಲ್ಲಿದ್ದಾನೆ?” ಎಂದು ಅನ್ಯರು ಏಕೆ ಹೇಳಬೇಕು?


ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.


ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.


ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.


ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.


ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲ ಹತ್ತು ಮೊಳ.


“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.


“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.


ಆಗ ನಾನು, “ಕರ್ತನಾದ ಯೆಹೋವನೇ, ಲಾಲಿಸು. ಇದನ್ನು ನಿಲ್ಲಿಸಿಬಿಡು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗವಾಗಿದೆ” ಎಂದು ಆಜ್ಞಾಪಿಸಲು


‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”


ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ, ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ.


ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.


ದೇವರೇ, ವಿರೋಧಿಗಳು ಇನ್ನೆಲ್ಲಿಯ ತನಕ ನಿಂದಿಸುತ್ತಿರಬೇಕು? ವೈರಿಗಳು ನಿನ್ನ ನಾಮವನ್ನು ಸದಾಕಾಲವೂ ತಿರಸ್ಕರಿಸಬಹುದೋ?


ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.


ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ,


ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.


ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.


“ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನೀನು ನಮ್ಮ ಪೂರ್ವಿಕರಿಗೆ, ಇದರ ಉತ್ಪನ್ನವನ್ನೂ, ಸಮೃದ್ಧಿಯನ್ನೂ ಅನುಭವಿಸಿರಿ ಎಂದು ಹೇಳಿ ಕೊಟ್ಟ ದೇಶದಲ್ಲೇ ನಾವು ದಾಸರಾಗಿರಬೇಕಾಗಿ ಬಂದಿದೆ.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.


“ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.


ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.


ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.


ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.


ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.


ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.


ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು