Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನಿಮಗೆ ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಅನುಗ್ರಹಿಸುವೆನು; ನೀವು ಸಂತೃಪ್ತರಾಗುವಿರಿ; ನಿಮ್ಮನ್ನೆಂದಿಗೂ ಅನ್ಯಜನರ ನಿಂದೆಗೆ ಗುರಿಮಾಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರ ಬಿನ್ನಹವನ್ನು ಲಾಲಿಸಿ ಅವರಿಗೆ ಹೀಗೆ ಹೇಳಿದನು - ಇಗೋ, ನಾನು ಧಾನ್ಯದ್ರಾಕ್ಷಾರಸತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ; ಅವುಗಳಿಂದ ನಿಮಗೆ ತೃಪ್ತಿಯಾಗುವದು; ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು: “ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು. ನಿಮಗೆ ಬೇಕಾದಷ್ಟು ಇರುವದು. ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು, ನಾನು ನಿಮಗೆ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ನಿಮಗೆ ಸಾಕಾಗುವಷ್ಟು ಕಳುಹಿಸಿ, ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತರಾಗಿ ಇಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:19
21 ತಿಳಿವುಗಳ ಹೋಲಿಕೆ  

ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.


ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.


ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”


ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.


ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.


ಬೇಡುವ ಧಾನ್ಯ, ದ್ರಾಕ್ಷಾರಸ, ತೈಲಗಳಿಗೆ ಭೂಮಿಯು ಒಲಿಯುವುದು, ಬೇಡುವ ಇಜ್ರೇಲಿಗೆ ಅವು ಒಲಿಯುವವು.


ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.


ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.


ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.


ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.


“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು