Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದು ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ ಇಗೋ, ಪ್ರಬಲವಾದ ದೊಡ್ಡ ದಂಡು! ಇಂಥದು ಹಿಂದೆಂದೂ ಬಂದಿಲ್ಲ, ಇನ್ನು ಮುಂದೆ ತಲತಲಾಂತರಗಳ ಬಹು ವರುಷಗಳಲ್ಲಿಯೂ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:2
34 ತಿಳಿವುಗಳ ಹೋಲಿಕೆ  

ನನ್ನ ದೇಶದ ಮೇಲೆ ಬಲಿಷ್ಠವಾದ ಹಾಗೂ ಅಸಂಖ್ಯಾತವಾದ ಒಂದು ಜನಾಂಗವು ಏರಿ ಬಂದಿದೆ; ಅದರ ಹಲ್ಲುಗಳು ಸಿಂಹದ ಹಲ್ಲುಗಳೇ; ಅದರ ಕೋರೆ ಹಲ್ಲುಗಳು ಮೃಗರಾಜನ ಕೋರೆಗಳೇ.


ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.


ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.


ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.


ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.


ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.


ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.


ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.


ಅವನು, “ನಾನು ಕದಲುವುದೇ ಇಲ್ಲ; ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ.


ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ. ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು.


ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.


ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದಿಳಿದು ಐಗುಪ್ತ ದೇಶದ ಎಲ್ಲಾ ಕಡೆಯಲ್ಲಿಯೂ ಅಪರಿಮಿತವಾಗಿ ಮುತ್ತಿಕೊಂಡವು. ಅಂಥ ಮಿಡತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರಲು ಸಾಧ್ಯವಿಲ್ಲ.


ಅವು ನಿನ್ನ ಮನೆಗಳಲ್ಲಿಯೂ, ನಿನ್ನ ಪರಿವಾರದವರ ಮನೆಗಳಲ್ಲಿಯೂ, ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಎಂದೂ ಅವರು ನೋಡಿರುವುದಿಲ್ಲ’” ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು.


ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.


ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು.


ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.


ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.


ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.


ನೀನು ಮೇಲೇರಿ ಬಿರುಗಾಳಿಯಂತೆ ಹೊರಟು ಬರುವೆ. ನಿನ್ನ ಎಲ್ಲಾ ದಂಡುಗಳೂ ಅನೇಕ ಜನರ ಸಹಿತವಾಗಿ ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವುದು.’”


ಬಹು ದಿನಗಳ ಮೇಲೆ ಯೆಹೋವನು ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ” ಎಂದು ಹೇಳಿದನು.


ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.


ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.


ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು