ಯೋಯೇಲ 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಗುಂಪುವಿುಡತೆ, ಸಣ್ಣವಿುಡತೆ, ದೊಡ್ಡವಿುಡತೆ, ಚೂರಿವಿುಡತೆ, ಅಂತು ನಾನು ನಿಮ್ಮ ಮೇಲೆ ಕಳುಹಿಸಿದ ನನ್ನ ದೊಡ್ಡ ದಂಡು ತಿಂದುಬಿಟ್ಟ ವರುಷಗಳನ್ನು ನಾನು ನಿಮಗೆ ಕಟ್ಟಿಕೊಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ನನ್ನ ಸೈನ್ಯವನ್ನು ಕಳುಹಿಸಿದೆನು. ಮಿಡತೆಗಳ ಗುಂಪು, ದೊಡ್ಡ ಮಿಡತೆ, ನಾಶಮಾಡುವ ಮಿಡತೆ, ಹಾರುವ ಮಿಡತೆ, ಚೂರಿ ಮಿಡತೆಗಳು ಬಂದು ನಿಮಗಿದ್ದದ್ದನ್ನೆಲ್ಲಾ ತಿಂದುಬಿಟ್ಟವು. ಆದರೆ ಯೆಹೋವನಾದ ನಾನು ನಿಮ್ಮ ಸಂಕಟಕಾಲಕ್ಕೆ ಬದಲಾಗಿ ಸುಭಿಕ್ಷ ಕಾಲವನ್ನು ದಯಪಾಲಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು. ಅಧ್ಯಾಯವನ್ನು ನೋಡಿ |