Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬೆಟ್ಟಗಳ ತುತ್ತತುದಿಯಲ್ಲಿ ಹಾರಾಡುತ್ತವೆ; ರಥಗಳಂತೆ ಚೀತ್ಕಾರಮಾಡುತ್ತವೆ; ಕೂಳೆಸುಡುವ ಬೆಂಕಿಯಂತೆ ಚಟಪಟ ಮಾಡುತ್ತವೆ; ಸಮರಕ್ಕೆ ಸಿದ್ಧವಾದ ಶೂರರ ಸೈನ್ಯದಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಪರ್ವತಾಗ್ರಗಳಲ್ಲಿ ಅವು ಹಾರಾಡುವ ಶಬ್ದವು ರಥಗಳ ಚೀತ್ಕಾರದಂತೆಯೂ ಕೂಳೆಯನ್ನು ನುಂಗುವ ಬೆಂಕಿಯ ಚಟಪಟ ಧ್ವನಿಯ ಹಾಗೂ ಕೇಳಿಸುತ್ತದೆ; ಅವು ವ್ಯೂಹಕಟ್ಟಿಕೊಂಡ ಪ್ರಬಲವಾದ ಸೈನ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕಿವಿಗೊಟ್ಟು ಕೇಳಿರಿ. ಪರ್ವತಗಳ ಮೇಲೆ ಓಡುವ ರಥಗಳ ಶಬ್ದದಂತೆ ಅವರ ಶಬ್ದವು ಕೇಳುತ್ತದೆ. ಬೆಂಕಿಯ ಜ್ವಾಲೆಗಳು ಹೊಟ್ಟನ್ನು ಸುಡುವಂತೆ ಅವರ ಶಬ್ದವು ಕೇಳುತ್ತದೆ. ಬಲಿಷ್ಠರಾದ ಅವರು ಯುದ್ಧಕ್ಕೆ ಸಿದ್ಧರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ. ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:5
9 ತಿಳಿವುಗಳ ಹೋಲಿಕೆ  

ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು.


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ? ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ.


ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು