Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೂಕುನುಗ್ಗಲ್ಲಿಲ್ಲದೆ ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೂಕುನುಗ್ಗಲಿಲ್ಲದೆ, ಸಾಲುಸಾಲಾಗಿ ನಡೆಯುತ್ತವೆ, ಸಾಲುಗಳನ್ನು ಒಡೆಯದೆ ಆಯುಧಗಳ ನಡುವೆ ನುಗ್ಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಒಂದಕ್ಕೊಂದು ನೂಕಾಡುವದಿಲ್ಲ, ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ, ಸಾಲುಗಳು ಒಡೆದುಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಬ್ಬರಮೇಲೊಬ್ಬರು ಬೀಳದೆ ಪ್ರತಿಯೊಬ್ಬ ಸೈನಿಕನು ತನ್ನ ದಾರಿಯಲ್ಲಿಯೇ ಮುಂದುವರಿಯುವನು. ಒಬ್ಬ ಸೈನಿಕನಿಗೆ ಗಾಯವಾಗಿ ಬಿದ್ದರೂ ಉಳಿದವರು ನಿಲ್ಲದೆ ಮುಂದಕ್ಕೆ ನುಗ್ಗುತ್ತಾ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಒಂದು ಇನ್ನೊಂದನ್ನು ನೂಕುವುದಿಲ್ಲ. ಅವುಗಳಲ್ಲಿ ಪ್ರತಿಯೊಂದು ತನ್ನ ತನ್ನ ದಾರಿಯಲ್ಲಿ ಮುನ್ನಡೆಯುತ್ತವೆ. ತಮ್ಮ ಸ್ಥಾನಗಳನ್ನು ಬಿಟ್ಟುಕೊಡದೆ ಯುದ್ಧ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:8
11 ತಿಳಿವುಗಳ ಹೋಲಿಕೆ  

ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು.


ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.


ನಿನ್ನ ಉದ್ಯಾನದಲ್ಲಿವೆ ದಾಳಿಂಬೆಯಂತಹ ಉತ್ತಮ ವೃಕ್ಷಗಳು, ಜಟಮಾಂಸಿ ಮತ್ತು ಗೋರಂಟೆಗಳು,


ಕೇಳದಿದ್ದರೆ ದೈವಾಸ್ತ್ರದಿಂದ ಅಳಿದುಹೋಗುವರು, ಜ್ಞಾನಹೀನರಾಗಿಯೇ ಪ್ರಾಣಬಿಡುವರು.


ನಾನೂ ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ನಮ್ಮ ಬಟ್ಟೆಗಳನ್ನು ಬದಲಾಯಿಸಿರಲಿಲ್ಲ. ಪ್ರತಿಯೊಬ್ಬನು ನೀರನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದೆವು.


ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತುಕೊಳ್ಳುತ್ತಾ ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಿದ್ದರು.


ಆಯುಧಪಾಣಿಗಳಾದ ಎಲ್ಲಾ ಜನರನ್ನು ಅರಸನ ಸುತ್ತಲೂ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯ ವರೆಗೂ ಸಾಲಾಗಿ ನಿಲ್ಲಿಸಿದನು.


ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.


ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ;


ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ.


ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು