ಯೋಯೇಲ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇವಿುನಿಂದ ದನಿಗೈಯುತ್ತಾನೆ; ಭೂಮ್ಯಾಕಾಶಗಳು ನಡುಗುತ್ತವೆ. ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ ಇಸ್ರಾಯೇಲ್ಯರಿಗೆ ರಕ್ಷಣದುರ್ಗವೂ ಆಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು. ಅಧ್ಯಾಯವನ್ನು ನೋಡಿ |