Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗೆ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಯಾಗಿ ನಿಮ್ಮ ದೇವರಾದ ಯೆಹೋವನಾಗಿದ್ದೇನೆ ಎಂದು ನಿಮಗೆ ದೃಢವಾಗುವದು; ಆಗ ಯೆರೂಸಲೇಮು ಪವಿತ್ರವಾಗಿರುವದು; ಮ್ಲೇಚ್ಫರು ಇನ್ನು ಅದನ್ನು ಹಾದುಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:17
29 ತಿಳಿವುಗಳ ಹೋಲಿಕೆ  

ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.


ನಾನು ಶಿಕ್ಷಿಸದೆ ಇದ್ದ ಅವರ ರಕ್ತಾಪರಾಧವನ್ನು ಶಿಕ್ಷಿಸದೇ ಬಿಡುವುದಿಲ್ಲ. ಯೆಹೋವನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.


ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”


ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.


ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.


“ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.


ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.


ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.


ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ; ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಜ್ಞಾನವು ತುಂಬಿಕೊಂಡಿರುವುದು.


ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”


ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.


ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.’”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.


ಕರ್ತನೇ, ನಿನ್ನ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿನ್ನ ಪಟ್ಟಣವೂ ಮತ್ತು ನಿನ್ನ ಪವಿತ್ರ ಪರ್ವತವೂ ಆದ ಯೆರೂಸಲೇಮಿನ ಮೇಲೆ ನಿನಗಿರುವ ಕೋಪವನ್ನು, ನಿನ್ನ ರೋಷಾಗ್ನಿಯನ್ನು ದಯಮಾಡಿ ತೊಲಗಿಸಿಬಿಡು; ನಮ್ಮ ಮತ್ತು ನಮ್ಮ ಪೂರ್ವಿಕರ ಪಾಪಾಪರಾಧಗಳ ನಿಮಿತ್ತ ಯೆರೂಸಲೇಮೂ, ನಿನ್ನ ಜನವೂ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆಯಲ್ಲಾ.


ಇದೇ ಸಂಗತಿಯನ್ನು ತಮ್ಮ ಪೂರ್ವಿಕರಿಂದ ಕೇಳಿ, ಕಲಿತದ್ದನ್ನು ಮರೆಮಾಡದೆ ಪ್ರಕಟಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು