Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಕಾಲದಲ್ಲಿ ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವದು, ಗುಡ್ಡಗಳಿಂದ ಹಾಲುಹರಿಯುವದು, ಯೆಹೂದದ ತೊರೆಗಳಲ್ಲೆಲ್ಲಾ ನೀರು ತುಂಬಿರುವದು; ಯೆಹೋವನ ಆಲಯದೊಳಗಿಂದ ಬುಗ್ಗೆಯು ಉಕ್ಕಿಬಂದು ಜಾಲಿಯ ಹಳ್ಳವನ್ನು ತಂಪುಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಸಿಯ ಕಣಿವೆಗೆ ನೀರನ್ನು ಕೊಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ಕಣಿವೆಗೆ ಜಲ ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:18
18 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.


ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.


ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.


ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.


ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.


ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.


ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.


ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.


“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು