Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಸಕಲ ಜನಾಂಗಗಳನ್ನು ಕೂಡಿಸಿ ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡಿ ಅಲ್ಲಿ ನನ್ನ ಜನರಿಗಾಗಿ, ನನ್ನ ಸ್ವಾಸ್ತ್ಯವಾದ ಇಸ್ರಾಯೇಲ್ ಪ್ರಜೆಗೋಸ್ಕರ ಅವುಗಳೊಂದಿಗೆ ವಿವಾದಮಾಡುವೆನು. ಅವು ನನ್ನ ಜನರನ್ನು ದೇಶದೇಶಗಳಿಗೆ ಚದರಿಸಿ ನನ್ನ ದೇಶವನ್ನು ಹಂಚಿಕೊಂಡಿವೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು. ಯೆಹೋಷಾಫಾಟನ ತಗ್ಗಿಗೆ ಅವರನ್ನು ತರುವೆನು. ಅಲ್ಲಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯವಾಗಿ ಅವರ ಸಂಗಡ ವ್ಯಾಜ್ಯವಾಡುವೆನು. ಅವರು ಅವರನ್ನು ಜನಾಂಗಗಳಲ್ಲಿ ಚದುರಿಸಿ, ನನ್ನ ದೇಶವನ್ನು ಹಂಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:2
30 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.


ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.


ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.


ಜನಾಂಗಗಳು ಎಚ್ಚೆತ್ತುಕೊಂಡು, ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಲಿ. ಅಲ್ಲಿ ನಾನು ಸುತ್ತಣ ಜನಾಂಗಗಳಿಗೆಲ್ಲಾ, ನ್ಯಾಯತೀರಿಸಲು ಆಸೀನನಾಗುವೆನು.


“ಆ ದಿನದಲ್ಲಿ ಗೋಗನಿಗೆ ನಾನು ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಏರ್ಪಡಿಸುವೆನು; ಲವಣ ಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯೇ. ಅಲ್ಲಿ ಪ್ರಯಾಣ ಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಮತ್ತು ಅವನ ಸಮೂಹವೆಲ್ಲವನ್ನೂ ಸಮಾಧಿ ಮಾಡುವರು; ಅ ಕಣಿವೆಯನ್ನು ‘ಗೋಗನ ಸಮೂಹದ ಕಣಿವೆ’ ಎಂದು ಕರೆಯುವರು.


ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,


ಆ ಶಬ್ದವು ಭೂಮಿಯ ಕಟ್ಟಕಡೆಯವರೆಗೆ ವ್ಯಾಪಿಸುವುದು, ಯೆಹೋವನಿಗೂ ಜನಾಂಗಗಳಿಗೂ ವ್ಯಾಜ್ಯವುಂಟಷ್ಟೆ, ಅವನು ನರಜನ್ಮದವರೆಲ್ಲರ ಸಂಗಡ ನ್ಯಾಯಕ್ಕೆ ನಿಲ್ಲುವನು, ದುಷ್ಟರನ್ನು ಖಡ್ಗಕ್ಕೆ ಗುರಿಮಾಡುವನು” ಇದು ಯೆಹೋವನ ನುಡಿ.


ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.


ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.


ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?


ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.


ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.


ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.


“ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


“ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.


ಆಹಾ ತೀರ್ಪಿನ ತಗ್ಗಿನಲ್ಲಿ ಗುಂಪುಗುಂಪುಗಳಾಗಿ ಜನರಿದ್ದಾರೆ. ಏಕೆಂದರೆ ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿದೆ.


ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಲಿಲ್ಲ, ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು