Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಬೆಳ್ಳಿ ಬಂಗಾರಗಳನ್ನು ದೋಚಿಕೊಂಡು, ನನ್ನ ಅಮೂಲ್ಯವಾದ ವಸ್ತ್ರಗಳನ್ನು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಬೆಳ್ಳಿಬಂಗಾರಗಳನ್ನು ಅತ್ಯಮೂಲ್ಯವಾದ ಬೊಕ್ಕಸಗಳನ್ನು ದೋಚಿಕೊಂಡು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಬೆಳ್ಳಿಬಂಗಾರಗಳನ್ನು ಕಸುಕೊಂಡಿದ್ದೀರಿ, ನನ್ನ ಒಳ್ಳೊಳ್ಳೆಯ ಪ್ರಿಯವಸ್ತುಗಳನ್ನು ನಿಮ್ಮ ಸೌಧಗಳಿಗೆ ಸೂರೆಮಾಡಿಕೊಂಡು ಹೋಗಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ನನ್ನ ಬೆಳ್ಳಿಬಂಗಾರವನ್ನು ಕದ್ದುಕೊಂಡು ಹೋದಿರಿ. ನನ್ನ ಅಮೂಲ್ಯವಾದ ಸಂಪತ್ತನ್ನು ಕೊಂಡು ಹೋಗಿ ನಿಮ್ಮ ಪೂಜಾಸ್ಥಳಗಳಲ್ಲಿ ಇಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:5
15 ತಿಳಿವುಗಳ ಹೋಲಿಕೆ  

ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.


ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.


ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು.


ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪೂರ್ವಿಕರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ವಸ್ತುಗಳಿಂದಲೂ ಸೇವಿಸುವನು.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!


ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು,


ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.


ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು