Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟು ಬರುವಂತೆ ನಾನು ಅವರನ್ನು ಹುರಿದುಂಬಿಸಿ, ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಂತಿರಲು, ನೀವು ಅವರನ್ನು ಮಾರಿದ ಊರುಗಳಿಂದ ದಂಗೆಯೆದ್ದು ಹೊರಬರುವಂತೆ ಅವರನ್ನು ಹುರಿದುಂಬಿಸುವೆನು. ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರಲು ಇಗೋ, ನೀವು ಅವರನ್ನು ಮಾರಿದ ಸ್ಥಳದೊಳಗಿಂದ ಹೊರಟುಬರುವಂತೆ ನಾನು ಅವರನ್ನು ಹುರಿಗೊಳಿಸಿ ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ದೂರದ ಸ್ಥಳಗಳಿಗೆ ನನ್ನ ಜನರನ್ನು ಕಳುಹಿಸಿದಿರಿ, ಆದರೆ ನಾನು ಅವರನ್ನು ಹಿಂದೆ ತರುವೆನು. ಮತ್ತು ನೀವು ಮಾಡಿದ ಕೃತ್ಯಕ್ಕೆ ನಾನು ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಇಗೋ, ಎಲ್ಲಿ ಅವರನ್ನು ಮಾರಿದಿರೋ, ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ, ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:7
24 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.


ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.


ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”


ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.


ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.


ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.


“ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.


‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ಅವನು ಜನಾಂಗಗಳಲ್ಲಿ ಧ್ವಜವನ್ನೆತ್ತಿ, ಇಸ್ರಾಯೇಲರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ, ಯೆಹೂದದಿಂದ ಚದರಿದವರನ್ನೂ ಭೂಮಿಯ ನಾಲ್ಕು ಕಡೆಗಳಿಂದಲೂ ಕೂಡಿಸುವನು.


ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.


ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.


ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!


ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು