Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀನು ಕ್ರಿಸ್ತನೂ ಎಲೀಯನೂ ಆ ಪ್ರವಾದಿಯೂ ಅಲ್ಲವಾದರೆ ಸ್ನಾನಮಾಡಿಸುವದೇನು? ಎಂದು ಅವನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವರು ಅವನಿಗೆ, “ನೀನು ನಿನ್ನ ಬಗ್ಗೆ, ‘ನಾನು ಕ್ರಿಸ್ತನೂ ಅಲ್ಲ, ಎಲೀಯನೂ ಅಲ್ಲ, ಪ್ರವಾದಿಯೂ ಅಲ್ಲ’ ಎಂದು ಹೇಳುತ್ತಿರುವೆ. ಹಾಗಾದರೆ ನೀನು ಜನರಿಗೆ ಏಕೆ ದೀಕ್ಷಾಸ್ನಾನ ಮಾಡಿಸುವೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ಯೋಹಾನನಿಗೆ, “ನೀನು ಕ್ರಿಸ್ತ ಇಲ್ಲವೆ ಎಲೀಯನಾಗಲಿ, ಆ ಪ್ರವಾದಿಯಾಗಲಿ ಆಗಿರದಿದ್ದರೆ ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆನಿ ಜುವಾಂವಾಕ್ ಇಚಾರ್‍ಲ್ಯಾನಿ “ತಿಯಾ ಮೆಸ್ಸಿಯಾಬಿ ನ್ಹಯ್ ಹೊಲ್ಯಾರ್, ಎಲಿಯಾಬಿ ನ್ಹಯ್ ಹೊಲ್ಯಾರ್, ಅನಿ ಪ್ರವಾದಿಬಿ ನ್ಹಯ್ ಹೊಲ್ಯಾರ್, ತಸೆ ಜಾಲ್ಯಾರ್, ತಿಯಾ ಕಶೆ ಬಾಲ್ತಿಮ್ ದಿತೆಯ್?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:25
10 ತಿಳಿವುಗಳ ಹೋಲಿಕೆ  

ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.


“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.


ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.


ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.


ಅಲ್ಲಿ ಬಂದವರು ಫರಿಸಾಯರ ಕಡೆಯವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು