Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನ ಮೂಲಕವಾಗಿ ಸಮಸ್ತವು ಉಂಟಾಯಿತು; ಉಂಟಾಗಿರುವ ವಸ್ತುಗಳಲ್ಲಿ ಆತನಿಲ್ಲದೆ ಒಂದಾದರೂ ಉಂಟಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎಲ್ಲಾ ವಸ್ತುಗಳು ಆತನ ಮೂಲಕ ನಿರ್ಮಾಣಗೊಂಡವು. ಆತನಿಲ್ಲದೆ ಯಾವುದೂ ನಿರ್ಮಿತವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ವಾಕ್ಯವೆಂಬುವವರ ಮೂಲಕವಾಗಿಯೇ ಸಮಸ್ತವೂ ಸೃಷ್ಟಿಯಾಯಿತು. ಸೃಷ್ಟಿಯಾದವುಗಳಲ್ಲಿ ಯಾವುದೂ ಅವರಿಲ್ಲದೆ ಸೃಷ್ಟಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವಾನ್ ತೆಚ್ಯಾ ವೈನಾಚ್ ಸಗ್ಳಿ ಸಾಮಾನಾ ಕರ್ಲ್ಯಾನ್, ತೊ ನಸ್ತಾನಾ ಕಸ್ಲಿಬಿ ಸಾಮಾನಾ ರಚುನ್ ಹೊವ್ಕನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:3
20 ತಿಳಿವುಗಳ ಹೋಲಿಕೆ  

“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”


ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.


ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.


ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.


ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.


ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.


ನಾನು ಆತನ ಹತ್ತಿರ ಶಿಲ್ಪಿಯಾಗಿದ್ದುಕೊಂಡು ಪ್ರತಿದಿನವೂ ಆನಂದಿಸುತ್ತಾ, ಯಾವಾಗಲೂ ಆತನ ಮುಂದೆ ವಿನೋದಿಸುತ್ತಾ,


ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು.


ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.


ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ, ದೇವರ ಸೃಷ್ಟಿಗೆ ಮೂಲನೂ ಆಗಿರುವ ‘ಆಮೆನ್’ ಎಂಬಾತನು ಹೇಳುವುದೇನಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು