Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ. ಆದರೆ ನೀರಿನಿಂದ ಸ್ನಾನದೀಕ್ಷೆಕೊಡುವಂತೆ ನನ್ನನ್ನು ಕಳುಹಿಸಿದ ದೇವರು, ‘ಪವಿತ್ರಾತ್ಮ ಇಳಿದುಬಂದು ಯಾವ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತ,’ ಎಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನನಗೂ ಆತನ ಗುರುತಿರಲಿಲ್ಲ; ಆದರೆ ನೀರಿನ ಸ್ನಾನವನ್ನು ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನು - ಯಾವನ ಮೇಲೆ ಆತ್ಮವು ಇಳಿದುಬಂದು ಇರುವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮದ ಸ್ನಾನವನ್ನು ಕೊಡುವವನು ಎಂದು ತಾನೇ ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜಾಲ್ಯಾರ್‍ಬಿ ತೊ ಕೊನ್ ಮನುನ್ ಮಾಕಾ ಗೊತ್ತ್ ನತ್ತೆ. ಖರೆ ಮಾಕಾ ಪಾನಿಯಾನ್ ಬಾಲ್ತಿಮ್ ದಿವ್ಕ್ ಮನುನ್ ಧಾಡುನ್ ದಿಲ್ಲ್ಯಾ ದೆವಾನ್, ಕೊನಾಚ್ಯಾ ವರ್ತಿ ದೆವಾಚೊ ಆತ್ಮೊ ಉತರ್‍ತಲೊ ತುಕಾ ದಿಸ್ತಾ, ತೊಚ್ ಪವಿತ್ರ್ ಆತ್ಮ್ಯಾನ್ ಬಾಲ್ತಿಮ್ ದಿತಲೊ ಮನುನ್ ಮಾಕಾ ಸಾಂಗಟಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:33
16 ತಿಳಿವುಗಳ ಹೋಲಿಕೆ  

ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು” ಎಂದು ಅಪ್ಪಣೆ ಕೊಟ್ಟನು.


ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು.


ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.


ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.


ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.


ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.”


ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.


ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು