Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅವನನ್ನು ಯೇಸುವಿನ ಬಳಿಗೆ ಕರತಂದನು. (’ಮೆಸ್ಸೀಯ’ ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, “ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು,” ಎಂದು ನುಡಿದರು. (’ಕೇಫ’ ಎಂದರೆ ‘ಪೇತ್ರ’ ಇಲ್ಲವೇ ‘ಬಂಡೆ’ ಎಂದರ್ಥ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅವನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. (ಮೆಸ್ಸೀಯನು ಅಂದರೆ ಕ್ರಿಸ್ತನು. ) ಯೇಸು ಅವನನ್ನು ನೋಡಿ - ನೀನು ಯೋಹಾನನ ಮಗನಾದ ಸೀಮೋನನು; ಇನ್ನು ಮೇಲೆ ಕೇಫನೆನಿಸಿಕೊಳ್ಳುವಿ ಅಂದನು (ಕೇಫನಂದರೆ ಪೇತ್ರ. )

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅವನು ಸೀಮೋನನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಸೀಮೋನನ ಕಡೆಗೆ ನೋಡಿ, “ಯೋಹಾನನ ಮಗನಾದ ನಿನ್ನ ಹೆಸರು ಸೀಮೋನ. ನೀನು ಕೇಫನೆಂದು ಕರೆಸಿಕೊಳ್ಳುವೆ” ಎಂದು ಹೇಳಿದನು. (“ಕೇಫ” ಅಂದರೆ “ಪೇತ್ರ” ಎಂದರ್ಥ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಮಾನಾ ತೆನಿ ಸಿಮಾವಾಕ್ ಜೆಜುಕ್ಡೆ ಬಲ್ವುನ್ ಘೆವ್ನ್ ಯೆಲೊ. ತನ್ನಾ ಜೆಜುನ್ ತೆಕಾ ಬಗುನ್, “ತಿಯಾ ಜುವಾಂವಾಚೊ ಲೆಕ್ ಸಿಮಾವ್, ಖರೆ ತುಕಾ ಹ್ಯಾನ್ ಫಿಡೆ ಕೆಫಾಸ್ ಮನ್ತಾತ್”. ಕೆಫಾಸ್ ಮಟ್ಲ್ಯಾರ್, ಪೆದ್ರು ನಾಹೊಲ್ಯಾರ್, ಗುಂಡೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:42
20 ತಿಳಿವುಗಳ ಹೋಲಿಕೆ  

ಅನಂತರ ಕೇಫನಿಗೂ ತರುವಾಯ ಆತನು ಹನ್ನೆರಡು ಜನ ಅಪೊಸ್ತಲರಿಗೂ ಕಾಣಿಸಿಕೊಂಡನು.


ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.


ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?


ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.


ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.


ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,


ಮೂರು ವರ್ಷಗಳ ತರುವಾಯ ಕೇಫನ ಪರಿಚಯವನ್ನು ಮಾಡಿಕೊಳ್ಳಬೇಕೆಂದು ಯೆರೂಸಲೇಮಿಗೆ ಹೋಗಿ ಅವನ ಬಳಿಯಲ್ಲಿ ಹದಿನೈದು ದಿನಗಳು ಇದ್ದೆನು.


ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.


ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು.


ಯೇಸು ಆಕೆಗೆ “ಹೋಗಿ ನಿನ್ನ ಗಂಡನನ್ನು ಇಲ್ಲಿಗೆ ಕರೆದುಕೊಂಡು ಬಾ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು