ಯೋಹಾನ 1:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಫಿಲಿಪ್ಪನು ನತಾನಯೇಲನನ್ನು ಕಂಡುಕೊಂಡು ಅವನಿಗೆ - ಯಾವನ ವಿಷಯವಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನು ನಮಗೆ ಸಿಕ್ಕಿದನು; ಆತನು ಯಾರಂದರೆ ಯೋಸೇಫನ ಮಗನಾದ ನಜರೇತಿನ ಯೇಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಫಿಲಿಪ್ಪನು ನತಾನಿಯೇಲನನ್ನು ಕಂಡು ಅವನಿಗೆ, “ಯಾವನ ವಿಷಯದಲ್ಲಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನನ್ನು ನಾವು ಕಂಡುಕೊಂಡೆವು. ಆತನ ಹೆಸರು ಯೇಸು. ಆತನು ಯೋಸೇಫನ ಮಗನು. ಆತನು ನಜರೇತಿನವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಫಿಲಿಪಾಕ್ ನಾಥಾನಾಯೆಲ್ ಗಾವ್ಲೊ, ತನ್ನಾ ಫಿಲಿಪಾನ್ ತೆಕಾ, “ಮೊಯ್ಜೆನ್ ಅಪ್ನಾಚ್ಯಾ ಖಾಯ್ದ್ಯಾತ್ನಿ ಅನಿ ಪ್ರವಾದ್ಯಾನಿ ಅಪ್ನಾಚ್ಯಾ ಪುಸ್ತಕಾತ್ನಿ ಕೊನಾಚ್ಯಾ ವಿಶಯಾತ್ ಲಿವಲ್ಲ್ಯಾನಾತ್ ತೊ ಅಮ್ಕಾ ಗಾವ್ಲೊ. ತೊ ನಜರೆತಾತ್ಲೊ ಜೆಜು ಜುಜೆಚೊ ಲೆಕ್” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |