Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನತಾನಯೇಲನು - ಒಳ್ಳೇದೇನಾದರೂ ನಜರೇತಿನಿಂದ ಬರುವದುಂಟೇ? ಅಂದಾಗ ಫಿಲಿಪ್ಪನು - ಬಂದು ನೋಡು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಆದರೆ ನತಾನಿಯೇಲನು ಫಿಲಿಪ್ಪನಿಗೆ, “ನಜರೇತಿನಿಂದ ಒಳ್ಳೆಯದೇನಾದರೂ ಬರುವುದೇ?” ಎಂದು ಕೇಳಿದನು. ಫಿಲಿಪ್ಪನು, “ಬಂದು ನೋಡು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ನತಾನಯೇಲನು ಕೇಳಲು, “ಬಂದು ನೋಡು,” ಎಂದು ಫಿಲಿಪ್ಪನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತನ್ನಾ ನಾಥಾನಾಯೆಲಾನ್, “ನಜರೆತಾತ್ನಾ ಕಾಯ್ ತರ್ ಬರೆ ಮನ್ತಲೆ ಯೆವ್ಕ್ ಹೊತಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಫಿಲಿಪಾನ್ ತೆಕಾ “ಯೆ ಅನಿ ಬಗ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:46
14 ತಿಳಿವುಗಳ ಹೋಲಿಕೆ  

ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.


“ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.


ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.


“ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ?


ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.


ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,


ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.


ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.


ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.


ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.


ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.


ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು