Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ನತಾನಯೇಲನು - ನನ್ನನ್ನು ನೀನು ಹೇಗೆ ಬಲ್ಲೆ? ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು - ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರದ ಮರದ ಕೆಳಗೆ ಇದ್ದಾಗ ನಿನ್ನನ್ನು ನೋಡಿದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ನತಾನಿಯೇಲನು, “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಕೇಳಿದನು. ಯೇಸು, “ಫಿಲಿಪ್ಪನು ನನ್ನ ಬಗ್ಗೆ ನಿನಗೆ ತಿಳಿಸುವುದಕ್ಕಿಂತ ಮೊದಲೇ ನೀನು ಅಂಜೂರದ ಮರದ ಕೆಳಗಿದ್ದಾಗ ನಾನು ನಿನ್ನನ್ನು ನೋಡಿದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಅದಕ್ಕೆ ನತಾನಯೇಲನು, “ನೀವು ನನ್ನನ್ನು ಹೇಗೆ ಬಲ್ಲಿರಿ?” ಎಂದು ಕೇಳಲು, ಯೇಸು ಅವನಿಗೆ, “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮುಂಚೆಯೇ ನೀನು ಅಂಜೂರದ ಮರದ ಕೆಳಗಿರುವುದನ್ನು ನಾನು ಕಂಡೆನು,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ತನ್ನಾ ನಾಥಾನಾಯೆಲಾನ್ ಜೆಜುಕ್, “ತಿಯಾ ಮಾಕಾ ಕಶೆ ವಳಕ್ತೆಯ್?” ಮನುನ್ ಇಚಾರ್‍ಲ್ಯಾನ್. ಜೆಜುನ್ ತೆಕಾ, “ಫಿಲಿಪಾ ತುಕಾ ಬಲ್ವುಚ್ಯಾ ಅದ್ದಿ ಮಿಯಾ ತುಕಾ ಅಂಜುರಾಚ್ಯಾ ಝಾಡಾಚ್ಯಾ ಬುಡಿ ಹೊತ್ತ್ಯಾ ತನ್ನಾ ಬಗಟ್ಲೊ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:48
14 ತಿಳಿವುಗಳ ಹೋಲಿಕೆ  

ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.


ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,


ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.


ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.


ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.


ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.


ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು