Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಇದಲ್ಲದೆ ಅವನಿಗೆ - ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರಿಹೋಗುತ್ತಾ ಇಳಿದುಬರುತ್ತಾ ಇರುವದನ್ನೂ ನೋಡುವಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದುಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಮಾನಾ ತೆನಿ ತೆಂಕಾ, “ಮಿಯಾ ತುಮ್ಕಾ ಖರೆಚ್! ಸಾಂಗ್ತಾ: ಮಾನ್ಸಾಚ್ಯಾ ಲೆಕಾಚ್ಯಾ ವರ್ತಿ ಸರ್ಗ್ ಉಗ್ಡುನ್ ದೆವಾಚಿ ದುತಾ ಚಡ್ತಲೆ ಅನಿ ಉತರ್ತಲೆ ತುಮಿ ಬಗ್ತ್ಯಾಶಿ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:51
55 ತಿಳಿವುಗಳ ಹೋಲಿಕೆ  

ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.


“ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು.


ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು.


ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ಯೇಸುವು “ಹೌದು ನಾನೇ! “ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.


ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.


ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.


ಅವನು ಧ್ಯಾನಪರವಶನಾಗಿ ಆಕಾಶವು ತೆರೆದಿರುವುದನ್ನೂ, ನಾಲ್ಕು ಮೂಲೆಗಳನ್ನು ಕಟ್ಟಿದ್ದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವುದನ್ನೂ ಕಂಡನು.


ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು


ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.


ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.


ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.


ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,


ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.


ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿಯಲ್ಲಿ ನಿಂತುಕೊಂಡರು.


ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.


“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.


ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.


ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ ನಿಮ್ಮ ದುಃಖವು ಹೋಗಿ ಆನಂದ ಬರುವುದು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.


ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,


ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.


ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.


ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.


ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.


ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.


ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.


ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು.


ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.


ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.


ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.


ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು