Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತನ್ನ ಮೂಲಕವಾಗಿ ಎಲ್ಲರು ನಂಬುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡುವದಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೋಹಾನನು ಬೆಳಕಿನ (ಕ್ರಿಸ್ತನ) ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ಬಂದನು. ತನ್ನ ಮೂಲಕ ಎಲ್ಲಾ ಜನರು ಬೆಳಕಿನ ಬಗ್ಗೆ ಕೇಳಿ ನಂಬಿಕೊಳ್ಳಲೆಂದು ಅವನು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ತನ್ನ ಮೂಲಕ ಎಲ್ಲರು ವಿಶ್ವಾಸವಿಡುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡಲು ಯೋಹಾನನು ಸಾಕ್ಷಿಯಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೊ ಲೊಕಾಕ್ನಿ ಉಜ್ವೊಡಾಚ್ಯಾ ವಿಶಯಾತ್ ಸಾಕ್ಷಿ ದಿವ್ಕ್ ಮನುನ್ ಯೆಲೊ, ಅಶೆ ಸಗ್ಳಿ ಲೊಕಾ ಹಿ ಖಬರ್ ಆಯ್ಕುನ್ ವಿಶ್ವಾಸ್ ಕರುಸಾಟ್ನಿ ಮನುನ್ ತೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:7
16 ತಿಳಿವುಗಳ ಹೋಲಿಕೆ  

ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,


ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.


ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.


ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.


ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.


ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.


ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು