Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರೀಹಟ್ಟಿಯೊಳಗೆ ಬಾಗಲಿಂದ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನು ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಕುರಿಹಟ್ಟಿಯೊಳಗೆ ಪ್ರವೇಶಿಸುವಾಗ ಬಾಗಿಲಿನ ಮೂಲಕ ಪ್ರವೇಶಿಸಬೇಕು. ಮತ್ತೆಲ್ಲಿಂದಾದರೂ ಹತ್ತಿ ಬರುವವನು ಸುಲಿಗೆಗಾರನಾಗಿದ್ದಾನೆ; ಕುರಿಗಳನ್ನು ಕದ್ದುಕೊಳ್ಳಲು ಪ್ರಯತ್ನಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಬಾಗಿಲಿನಿಂದ ಕುರಿಹಟ್ಟಿಯೊಳಗೆ ಬಾರದೆ ಬೇರೆ ಎಲ್ಲಿಂದಾದರೂ ಒಳಗೆ ಬರುವವನು ಕಳ್ಳನೂ ದರೋಡೆಕೋರನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಅಶೆ ಮಟ್ಲ್ಯಾನ್, “ಮಿಯಾ ತುಮ್ಕಾ ಖರೆಚ್! ಸಾಂಗ್ತಾ ಬಕ್ರ್ಯಾಂಚ್ಯಾ ಗೊಟ್ಯಾತ್ ಜೆ ಕೊನ್ ದಾರಾತ್ನಾ ಭುತ್ತುರ್ ಗುಸಿನಾ, ವೈನಾ ಚೆಡುನ್ ದುಸ್ರ್ಯಾಕ್ನಾಚ್ ಭುತ್ತುರ್ ಗುಸ್ತಾ ತೊ ಚೊರ್ ಅನಿ ಲುಟುನ್ ಘೆವ್ನ್ ಜಾತಲೊ ಮಾನುಸ್ ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:1
28 ತಿಳಿವುಗಳ ಹೋಲಿಕೆ  

“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.


ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.


ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.


ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.


ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.


ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.


ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.


ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.


ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ.


ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು