Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14-15 ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14-15 ನಾನೇ ಒಳ್ಳೇ ಕುರುಬನು; ತಂದೆಯು ನನ್ನನ್ನು ನಾನು ತಂದೆಯನ್ನು ತಿಳಿದಿರುವಂತೆಯೇ ನಾನು ನನ್ನ ಕುರಿಗಳನ್ನು ತಿಳಿದಿದ್ದೇನೆ; ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14-15 “ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಿಯಾ ಬರೊ ಕುರ್‍ಬುರ್, ಕಶೆ ಬಾಬಾ ಮಾಕಾ ವಳಕ್ತಾ ಅನಿ ಮಿಯಾ ಬಾಬಾಕ್ ವಳಕ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:14
23 ತಿಳಿವುಗಳ ಹೋಲಿಕೆ  

ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.


“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.


ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.


ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.


ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.


ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ಸತ್ತವನಾಗಿರುವೆ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.


ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು