Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇನ್ನು ಎಷ್ಟು ಕಾಲ ನಮ್ಮಲ್ಲಿ ಅನುಮಾನ ಹುಟ್ಟಿಸುತ್ತೀ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೂದ್ಯರು ಯೇಸುವಿನ ಸುತ್ತಲೂ ನೆರೆದರು. ಅವರು ಆತನಿಗೆ, “ಇನ್ನೆಷ್ಟುಕಾಲ ನೀನು ನಿನ್ನ ಬಗ್ಗೆ ನಮ್ಮನ್ನು ಆಶ್ಚರ್ಯಗೊಳಿಸುವೆ? ನೀನು ಕ್ರಿಸ್ತನಾಗಿದ್ದರೆ, ನಮಗೆ ಸ್ಪಷ್ಟವಾಗಿ ತಿಳಿಸು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯೆಹೂದ್ಯರು ಯೇಸುವನ್ನು ಸುತ್ತುವರೆದು, “ಇನ್ನೆಷ್ಟು ಕಾಲ ನಮ್ಮನ್ನು ಸಂಶಯದಲ್ಲಿರಿಸುವೆ? ನೀನು ಕ್ರಿಸ್ತನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಜುದೆವ್ ಲೊಕಾ ತ್ಯೆಚ್ಯಾ ಭೊತ್ಯಾನಿ ಗೊಳಾ ಹೊಲಿ, ಅನಿ, “ಅಮ್ಕಾ ಅನಿ ಕವ್ಡೆ ಪತರ್ ಸಾಂಗಿನಸ್ತಾನಾಚ್ ರ್‍ಹಾತೆಯ್? ಮನುನ್ ಅಮ್ಕಾ ಖರೆಚ್! ಫೊಡುನ್ ಸಾಂಗ್” ತಿಯಾ ಮೆಸ್ಸಿಯಾ ಕಾಯ್? ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:24
13 ತಿಳಿವುಗಳ ಹೋಲಿಕೆ  

ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,


ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.


ಆಗ ಅವರು ಆತನಿಗೆ, “ನೀನು ಯಾರು?” ಎನ್ನಲೂ, ಯೇಸು ಅವರಿಗೆ, “ಮೊದಲಿನಿಂದಲೇ ನಾನು ನಿಮಗೆ ಹೇಳಿದಂಥದ್ದೇ.


“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.


ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.


“ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.


ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.


ಹೀಗಿರುವಲ್ಲಿ ಇಸ್ರಾಯೇಲ್ ಜನರು ಬರಬೇಕಾದ ಕ್ರಿಸ್ತನನ್ನು ಎದುರು ನೋಡುವವರಾಗಿದ್ದದರಿಂದ ಅವರೆಲ್ಲರೂ ಯೋಹಾನನ ವಿಷಯವಾಗಿ ಇವನೇ ಆ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಮನಸ್ಸಿನಲ್ಲಿ ವಿಚಾರಮಾಡಿಕೊಳ್ಳುತ್ತಿರಲು,


ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.


ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.


ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,


ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು