Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾನೂ ತಂದೆಯೂ ಒಂದಾಗಿದ್ದೇವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಬಾಬಾ ಅನಿ ಮಿಯಾ ಎಕುಚ್” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:30
18 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?


ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.


ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ತಂದೆಗೆ ಇರುವುದೆಲ್ಲಾ ನನ್ನದು. ಆದುದರಿಂದಲೇ ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಸುವನೆಂದು ನಾನು ಹೇಳಿದೆನು.


ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.


ಇಸ್ರಾಯೇಲರೇ, ಕೇಳಿರಿ, ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು;


ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತ ಮಹೋನ್ನತನು. ಅವುಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕಸಿದುಕೊಳ್ಳಲಾರರು.


ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು