Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ಯೆಹೂದ್ಯರು, ಅವರತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೂದ್ಯರು ಆತನನ್ನು ಹೊಡೆದು ಕೊಲ್ಲಬೇಕೆಂದು ತಿರಿಗಿ ಕಲ್ಲುಗಳನ್ನು ತೆಗೆದುಕೊಂಡು ಬರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೂದ್ಯರು ಯೇಸುವನ್ನು ಕೊಲ್ಲಲು ಮತ್ತೆ ಕಲ್ಲುಗಳನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಯೆಹೂದಿ ನಾಯಕರು ಪುನಃ ಯೇಸುವಿನ ಮೇಲೆ ಕಲ್ಲೆಸೆಯಲು ಕಲ್ಲುಗಳನ್ನು ಎತ್ತಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಅನಿ ಜುದೆವ್ ಲೊಕಾನಿ ತೆಕಾ ಗುಂಡ್ಯಾನಿ ಮಾರುಕ್ ಮನುನ್ ಗುಂಡೆ ಎಚುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:31
13 ತಿಳಿವುಗಳ ಹೋಲಿಕೆ  

ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.


ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.


ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.


ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು


ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು.


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.


ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.


ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು.


ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,


ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.


ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು