Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ನಂತರ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಹಿಂದೆ ಹೋಗುತ್ತವೆ. ಏಕೆಂದರೆ ಅವುಗಳಿಗೆ ಅವನ ಸ್ವರ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಹೊರಗೆ ಬಿಡುತ್ತಾನೆ. ಸ್ವಂತ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ; ಕುರಿಗಳು ಅವನ ಸ್ವರವನ್ನು ತಿಳುಕೊಂಡು ಅವನ ಹಿಂದೆ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಬಳಿಕ ಅವುಗಳ ಮುಂದೆ ಹೋಗುತ್ತಾ ಅವುಗಳಿಗೆ ಮಾರ್ಗದರ್ಶನ ಮಾಡುತ್ತಾನೆ. ಕುರಿಗಳು ಅವನನ್ನು ಹಿಂಬಾಲಿಸುತ್ತವೆ; ಏಕೆಂದರೆ ಅವು ಅವನ ಸ್ವರವನ್ನು ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಭಾಯ್ರ್ ಘೆವ್ನ್ ಯೆಲ್ಲ್ಯಾ ತನ್ನಾ ತೊ ತೆಂಚ್ಯಾ ಫಿಡೆ-ಫಿಡೆ ಜಾತಾ ಅನಿ ತಿ ಬಕ್ರಿ ತ್ಯೆಚ್ಯಾ ಫಾಟ್ನಾ ಯೆತಾತ್. ಕಶ್ಯಾಕ್ ಮಟ್ಲ್ಯಾರ್ ತೆಂಕಾ ತೆಚೊ ಧನ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:4
23 ತಿಳಿವುಗಳ ಹೋಲಿಕೆ  

ನಿಮ್ಮ ಮುಂದೆ ಮಾರ್ಗದರ್ಶಕನಾಗಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ, ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮವನಾಗಿ ಯುದ್ಧಮಾಡುವನು.


ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.


ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.


ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.


ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.


ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ.


ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಅಲ್ಲಿಗೆ ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ, ನಮಗೋಸ್ಕರ ಮುಂಚಿತವಾಗಿಯೇ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.


ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ಅಗೋ ನನ್ನ ಕಾಂತನ ಸಪ್ಪಳ! ಅವನು ಬೆಟ್ಟಗಳ ಮೇಲೆ ಹಾರುತ್ತಾ, ಗುಡ್ಡಗಳಲ್ಲಿ ಜಿಗಿಯುತ್ತಾ ಬರುತ್ತಿದ್ದಾನೆ;


ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.


ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.


ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.


ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು