Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅಪರಿಚಿತನನ್ನು ಅವು ಹಿಂಬಾಲಿಸುವುದಿಲ್ಲ; ಅವನಿಂದ ದೂರ ಓಡಿಹೋಗುತ್ತವೆ. ಅಪರಿಚಿತರ ಸ್ವರವನ್ನು ಅವು ಗುರುತಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ; ಅನ್ಯನ ಹಿಂದೆ ಹೋಗದೆ ಅವನ ಬಳಿಯಿಂದ ಓಡಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಕುರಿಗಳು ತಮಗೆ ಗೊತ್ತಿಲ್ಲದ ವ್ಯಕ್ತಿಯನ್ನು ಎಂದಿಗೂ ಹಿಂಬಾಲಿಸುವುದಿಲ್ಲ. ಅವುಗಳು ಆ ವ್ಯಕ್ತಿಯ ಬಳಿಯಿಂದ ಓಡಿಹೋಗುತ್ತವೆ. ಏಕೆಂದರೆ ಅವುಗಳು ಅವನ ಸ್ವರವನ್ನು ತಿಳಿದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವವು. ಏಕೆಂದರೆ ಅವು ಅಪರಿಚಿತನ ಸ್ವರವನ್ನು ಗುರುತಿಸುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಿ ಬಕ್ರಿ ವಳಕ್ ನಸಲ್ಲ್ಯಾಂಚ್ಯಾ ಫಾಟ್ನಾ ಜಾಯ್ನಾತ್, ವಳಕ್ ನಸಲ್ಲ್ಯಾನಿಕ್ನಾ ತಿ ಧುರ್ ಪಳುನ್ ಜಾತಾತ್. ಕಶ್ಯಾಕ್ ಮಟ್ಲ್ಯಾರ್ ತಿ ಬಕ್ರಿ ತೆಂಚೊ ಧನ್ ವಳ್ಕಿನಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:5
15 ತಿಳಿವುಗಳ ಹೋಲಿಕೆ  

“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.


ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.


ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.


ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.


ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?” ಎಂದು ಕೇಳಿದನು.


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.


ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.


ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು